ಹುಚ್ಚು ಯೋಚನೆ ಮತ್ತು ಯೋಜನೆ…….
Taluknewsmedia.comಕಾವೇರಿ ಆರತಿ ಮತ್ತು ಕೆಆರ್‌ಎಸ್ ಜಲಾಶಯದ ಬಳಿ ಬೃಹತ್ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವ ಸರ್ಕಾರದ ತೀರ್ಮಾನ……….. ಯಾಕ್ರೀ ಸ್ವಾಮಿ, ನದಿಯನ್ನು ಇಟ್ಕೊಂಡು ರಾಜಕೀಯನೋ, ದುಡ್ಡು ಮಾಡಲಿಕ್ಕೋ, ಪ್ರಚಾರ ಪಡೆಯಲಿಕ್ಕೋ ಪ್ರಯತ್ನ ಪಡ್ತೀರಿ. ಅದೊಂದು ಜೀವ ಜಲ. ಅದನ್ನು ಅದರ ಪಾಡಿಗೆ ಬಿಟ್ಟು ಬಿಡಿ……ಕೃಷಿಗಾಗಿಯೋ, ಕುಡಿಯುವ ನೀರಿಗಾಗಿಯೋ ಎಷ್ಟು ಸಾಧ್ಯವೋ ಅಷ್ಟು ಅದನ್ನ ಸಹಜ ರೀತಿಯಲ್ಲೇ ಉಪಯೋಗಿಸಿಕೊಳ್ಳಿ ಅಷ್ಟೇ. ಅದು ನದಿಗೆ ನೀವು ಕೊಡಬಹುದಾದ ಬಹುದೊಡ್ಡ ಕೊಡುಗೆ. ಅದು ಬಿಟ್ಟು ಅನಾವಶ್ಯಕವಾಗಿ ಕಾವೇರಿ ಆರತಿ ಎನ್ನುವ ಕಾರ್ಯಕ್ರಮ ಮಾಡಿ ಆ ನದಿಯನ್ನು ಕಲ್ಮಶ ಮಾಡುವುದಲ್ಲದೆ, ಮೌಢ್ಯವನ್ನು ಬಿತ್ತುತ್ತಿದ್ದೀರಿ………. ಗಂಗಾರತಿ ಎಂಬ ಕಾರ್ಯಕ್ರಮ ಇದೇ ರೀತಿಯ ಮೌಢ್ಯ. ಇದು ಅದರ ನಕಲು. ಜನರನ್ನು ಭಾವನಾತ್ಮಕವಾಗಿ ಸೆಳೆಯುವ ರಾಜಕೀಯ ಕುತಂತ್ರ. ಜನರಲ್ಲಿ ಗುಲಾಮಿ ಮನಸ್ಥಿತಿ ಬೆಳೆಸುವ ಹುನ್ನಾರ……… ನದಿ ನೀರಿಗೆ ಒಂದಷ್ಟು ಗೌರವ, ಒಂದಷ್ಟು ಪ್ರೀತಿ ಕೊಡಬೇಕೆಂಬುದು ನಿಜ, ಅದು ಸಹಜವಾಗಿಯೇ…
ಮುಂದೆ ಓದಿ..
