ಆದಿಚುಂಚನಗಿರಿ ವಿಶ್ವವಿದ್ಯಾಲಯದ ೫ನೇ ಘಟಿಕೋತ್ಸವ..
Taluknewsmedia.comನಾಗಮಂಗಲ : ಪ್ರತಿಷ್ಠಿತ ಆದಿಚುಂಚನಗಿರಿ ವಿಶ್ವವಿದ್ಯಾಲಯದ ೫ನೇ ಘಟಿಕೋತ್ಸವವು ಇದೇ ಜುಲೈ ೨೯ರಂದು ಬೆಳಿಗ್ಗೆ ೧೦:೩೦ಕ್ಕೆ ಬಿಜಿಎಸ್ ಸಭಾಂಗಣದಲ್ಲಿ ಜರುಗಲಿದೆ ಎಂದು ಕುಲಪತಿ ಎಸ್ ಎನ್ ಶ್ರೀಧರ ತಿಳಿಸಿದರು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಸಮಾರಂಭದ ದಿವ್ಯ ಸಾನಿಧ್ಯವನ್ನು ಗೌರವಾನ್ವಿತ ಕುಲಾಧಿಪತಿಗಳು ಹಾಗೂ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಇಸ್ರೋ ಮಾಜಿ ಅಧ್ಯಕ್ಷರಾದ ಡಾ. ಎಸ್. ಸೋಮನಾಥ್, ಗೌರವ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಭಾಗವಹಿಸುವರು. ವಿಶ್ವವಿದ್ಯಾಲಯದ ಕುಲಪತಿ ಡಾ ಎಸ್ ಎನ್ ಶ್ರೀಧರ. ಕುಲಸಚಿವ ಡಾ ಸಿ ಕೆ ಸುಬ್ಬರಾಯ.ಕುಲ ಸಚಿವ (ಮೌಲ್ಯಮಾಪನ) ಡಾ. ನಾಗರಾಜ್ ಉಪಸ್ಥಿತರಿರುವರು. ೯೬೮ ವಿದ್ಯಾರ್ಥಿನಿಯರಿಗೆ ೯೧೨ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಪ್ರಮಾಣ ಪತ್ರ ಹಾಗೂ…
ಮುಂದೆ ಓದಿ..
