ವಿಶೇಷ ಸುದ್ದಿ 

ಸಾಮಾಜಿಕ ಕಳಕಳಿ: ಧಾರ್ಮಿಕ ಭಾವನೆಗಳು ಮತ್ತು ನ್ಯಾಯಾಂಗದ ಗೌರವ — ಚಿಂತನೆಗೆ ಆಹ್ವಾನ ನೀಡಿದ ಘಟನೆಯೊಂದು

Taluknewsmedia.com

Taluknewsmedia.comಸಾಮಾಜಿಕ ಕಳಕಳಿ: ಧಾರ್ಮಿಕ ಭಾವನೆಗಳು ಮತ್ತು ನ್ಯಾಯಾಂಗದ ಗೌರವ — ಚಿಂತನೆಗೆ ಆಹ್ವಾನ ನೀಡಿದ ಘಟನೆಯೊಂದು ದಿಲ್ಲಿಯ ಸುಪ್ರೀಂ ಕೋರ್ಟ್‌ನಲ್ಲಿ ಇತ್ತೀಚೆಗೆ ನಡೆದ ಘಟನೆ ದೇಶದ ಸಾಮಾಜಿಕ ಮತ್ತು ಧಾರ್ಮಿಕ ಸಂವೇದನೆಗಳ ಕುರಿತಂತೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ ವಕೀಲ ರಾಜೇಶ್ ಕಿಶೋರ್, ಈ ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಕ್ರಮಗಳ ಕುರಿತು ಯಾವುದೇ ವಿಷಾದವಿಲ್ಲವೆಂದು ತಿಳಿಸಿದ್ದಾರೆ. ರಾಜೇಶ್ ಕಿಶೋರ್ ಅವರು ಖಜುರಾಹೋದಲ್ಲಿ ಭಗ್ನಗೊಂಡ ವಿಷ್ಣುಮೂರ್ತಿಗಳ ಮರುಸ್ಥಾಪನೆಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಆದರೆ, ಆ ಅರ್ಜಿಯ ವಿಚಾರಣೆಯ ವೇಳೆ ಸಿಜೆಐ ಗವಾಯಿ ಅವರಿಂದ “ಮೂರ್ತಿಯನ್ನು ಮರುಸ್ಥಾಪನೆ ಮಾಡಬೇಕಾದರೆ ವಿಷ್ಣುವನ್ನೇ ಹೋಗಿ ಕೇಳಿ” ಎಂಬ ವ್ಯಂಗ್ಯಾತ್ಮಕ ಹೇಳಿಕೆ ಬಂದಿತೆಂದು ಅವರು ಆರೋಪಿಸಿದ್ದಾರೆ. ಈ ಹೇಳಿಕೆ ತಮಗೆ ಅತ್ಯಂತ ನೋವನ್ನುಂಟುಮಾಡಿದ್ದು, ಅದೇ ಅಸಮಾಧಾನದಿಂದಾಗಿ ಅವರು…

ಮುಂದೆ ಓದಿ..
ವಿಶೇಷ ಸುದ್ದಿ 

ಗ್ರಾಮೀಣಾಭಿವೃದ್ದಿ ಯೋಜನೆಯ ಹೆಸರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಅಪರಾಧ ನಡೆದಿರುವುದು, ಮೈಕ್ರೊ ಫೈನಾನ್ಸ್ ನಡೆಸಿರುವ ಆರೋಪಗಳು ವ್ಯಾಪಕವಾಗಿದೆ.

Taluknewsmedia.com

Taluknewsmedia.comಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತಾದ ಹೋರಾಟಗಳ ವಿಷಯದಲ್ಲಿ ತಪ್ಪು ಮಾಹಿತಿ ಹರಡುತ್ತಿರುವ ಸಂದರ್ಭದಲ್ಲಿ .. ಮುಸುಕುದಾರಿ ಚಿನ್ನಯ್ಯ ಕೊಟ್ಟ ದೂರಿನ ಬಳಿಕ ಧರ್ಮಸ್ಥಳ ದೌರ್ಜನ್ಯದ ವಿರುದ್ಧದ ಹೋರಾಟ ಪ್ರಾರಂಭವಾಗಿದ್ದಲ್ಲ. ಧರ್ಮಸ್ಥಳದ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ, ಭೂ ಅಕ್ರಮ, ಮೈಕ್ರೋ ಫೈನಾನ್ಸ್ ದೌರ್ಜನ್ಯಗಳನ್ನು ತನಿಖೆ ನಡೆಸಲು ನೆಲ ಅಗೆಯಬೇಕಿಲ್ಲ. ಚಿನ್ನಯ್ಯ ಅನಾಮಿಕರಾಗಿ ಬಂದು ದೂರು ನೀಡಿದ ಬಳಿಕ ಅಸಹಜ ಸಾವುಗಳಾದ ಶವಗಳನ್ನು ಹೂತ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಯಿತೇ ವಿನಹ, ಅದು ಹೋರಾಟದ ಪ್ರಾರಂಭವಲ್ಲ. ಚಿನ್ನಯ್ಯರ ದೂರೇ ಹೋರಾಟದ ಮುಖ್ಯವಸ್ತುವಲ್ಲ. ಎಡಪಂಥೀಯ, ದಲಿತ, ಸಮಾನತಾವಾದಿ, ಮಹಿಳಾ ಹೋರಾಟಗಾರರು, ಚಿಂತಕರು ಯಾವತ್ತೂ ಕೂಡಾ ಹೋರಾಟಕ್ಕೆ ಅಪರಿಚಿತವಾಗಿದ್ದ ಚಿನ್ನಯ್ಯ, ಸುಜಾತ ಭಟ್ ರವರ ಹಿಂದೆ ಹೋಗಿದ್ದಿಲ್ಲ. ‘ಅವರ ದೂರಿಗೂ ನ್ಯಾಯ ಒದಗಿಸಿ’ ಎಂಬುದಷ್ಟೇ ನಮ್ಮೆಲ್ಲರ ಹೇಳಿಕೆಯಾಗಿತ್ತು. ಹಾಗಾಗಿ, ಚಿನ್ನಯ್ಯ, ಸುಜಾತ ಭಟ್ ರವರುಗಳು ಯೂಟರ್ನ್ ಹೊಡೆದ್ರು ಎಂಬುದೆಲ್ಲಾ ಸಾವು, ದೌರ್ಜನ್ಯ,…

ಮುಂದೆ ಓದಿ..