ಮನಿ ಡಬ್ಲಿಂಗ್ ಹಾಗೂ ಕ್ರಿಪ್ಟೋ ವಂಚನೆಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ
Taluknewsmedia.comಮನಿ ಡಬ್ಲಿಂಗ್ ಹಾಗೂ ಕ್ರಿಪ್ಟೋ ವಂಚನೆಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ತೀರ್ಥಹಳ್ಳಿ: ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕು ವ್ಯಾಪ್ತಿಯಲ್ಲಿ ಕ್ರಿಪ್ಟೋ ಕರೆನ್ಸಿ, ಬಿಟ್‌ಕಾಯಿನ್, ಮನಿ ಡಬ್ಲಿಂಗ್ ಎಂಬ ಆಮಿಷಗಳನ್ನು ಮುಂದಿಟ್ಟು ಜನರನ್ನು ವಂಚಿಸುವ ಘಟನೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಡಿವೈಎಸ್‌ಪಿ ಅರವಿಂದ ಕಲಗುಜ್ಜಿ ಮನವಿ ಮಾಡಿದ್ದಾರೆ. ಆನ್‌ಲೈನ್ ಮಾರ್ಕೆಟಿಂಗ್ ಹೆಸರಿನಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಕಡಿಮೆ ಸಮಯದಲ್ಲಿ ದುಪ್ಪಟ್ಟು ಲಾಭ ನೀಡಲಾಗುತ್ತದೆ ಎಂದು ನಂಬಿಸಿ, ಸಂಗ್ರಹಿಸಿದ ಹಣವನ್ನು ಬಿಟ್‌ಕಾಯಿನ್ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಇಂತಹ ವಂಚನಾ ಜಾಲದಲ್ಲಿ ಭಾಗಿಯಾದವರ ವಿರುದ್ಧ ದೂರು ಬಂದಲ್ಲಿ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. ಇದೇ ಸಂದರ್ಭದಲ್ಲಿ ಡಿಸೆಂಬರ್ 19ರಿಂದ ಆರಂಭಗೊಳ್ಳಲಿರುವ ಎಳ್ಳಮಾವಾಸ್ಯೆ ಜಾತ್ರೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜಾತ್ರೆ ನಡೆಯುವ ದಿನಗಳಲ್ಲಿ…
ಮುಂದೆ ಓದಿ..
