ನಾವು ಯಾರು ? ನಮ್ಮ ಯೋಗ್ಯತೆ ಏನು ?.
ನಾವು ಯಾರು ? ನಮ್ಮ ಯೋಗ್ಯತೆ ಏನು ?……… ಕೆಲವರ ಬಗ್ಗೆ ಹಲವು ಉದಾಹರಣೆಗಳು……. ಇದು ಆ ರೀತಿಯ ಜನಗಳಿಗೆ ಮಾತ್ರ ಅನ್ವಯ…. ಮೂಕ ಪ್ರಾಣಿಗಳಿಗೆ ಆಹಾರದಲ್ಲಿ ವಿಷವಿಕ್ಕುವ ಅನಾಗರಿಕರು ನಾವು ಅನಾಗರಿಕರು………. ಅನ್ನಭಾಗ್ಯದ ಹಸಿದ ಹೊಟ್ಟೆಯ ಅಕ್ಕಿ ಕದಿಯುವ ಕಳ್ಳರು ನಾವು ಕಳ್ಳರು…. ಕೊರೋನಾ ಕಷ್ಟದ ಸಮಯದಲ್ಲಿ ವೆಂಟಿಲೇಟರ್ ಖರೀದಿಯಲ್ಲಿ ದುಡ್ಡು ಹೊಡೆಯುವ ನೀಚರು ನಾವು ನೀಚರು….. ಬುದ್ಧಿಮಾಂದ್ಯ ಬೀದಿ ಹೆಣ್ಣಿನ ಅತ್ಯಾಚಾರ ಮಾಡುವ ಕೀಚಕರು ನಾವು ಕೀಚಕರು…… ವೃದ್ಧಾಪ್ಯದ ಪಿಂಚಣಿಯಲ್ಲಿ ಕಮೀಷನ್ ಹೊಡೆಯುವ ಕಿರಾತಕರು ನಾವು ಕಿರಾತಕರು…… ಡೆತ್ ಸರ್ಟಿಫಿಕೇಟ್ ನೀಡಲೂ ಲಂಚ ಪಡೆಯುವ ಭ್ರಷ್ಟರು ನಾವು ಭ್ರಷ್ಟರು…… ಗಂಡ ಹೆಂಡತಿಯ ಸ್ವಾರ್ಥಕ್ಕಾಗಿ ಹೆತ್ತವರನ್ನು ವೃದ್ದಾಶ್ರಮಕ್ಕೆ ಸೇರಿಸುವ ಕೊಳಕರು ನಾವು ಕೊಳಕರು…… ಹಣಕ್ಕಾಗಿ ಮನುಷ್ಯನ ಕಿಡ್ನಿಯನ್ನೇ ಕದಿಯುವ ಕಟುಕರು ನಾವು ಕಟುಕರು…… ಮೂರು ವರ್ಷದ ಹಸುಳೆಯ ಮೇಲೆ ಲೈಂಗಿಕ ದೌರ್ಜನ್ಯ ಮಾಡುವ ರಾಕ್ಷಸರು ನಾವು…
ಮುಂದೆ ಓದಿ..
