ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…..
ನನ್ನ ತಾಯಿ ದೈವೀ ಸ್ವರೂಪಿ,ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ,ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು,ನನ್ನ ಹೆಂಡತಿ ಪ್ರೀತಿಯ ಸಾಗರ,ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ,ನನ್ನ ಅತ್ತಿಗೆ ಮಮತಾಮಯಿ,ನನ್ನ ತಂಗಿ ಕರುಣಾಮಯಿ,ನನ್ನ ಗಂಡ ದಕ್ಷ ಪ್ರಾಮಾಣಿಕ,ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,………..ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ ರಕ್ತ ಸಂಬಂಧಿಗಳ ಬಗ್ಗೆ ಹೇಳುತ್ತಿರುತ್ತಾರೆ.( ಕೆಲವು ಅಪರೂಪದ ಅಪವಾದಗಳು ಇರಬಹುದು )ಆದರೆ ಬಹುತೇಕ ಜನರ ಅಭಿಪ್ರಾಯ ಇದೇ ಆಗಿರುತ್ತದೆ.ಹಾಗಾದರೆ ಇಷ್ಟೊಂದು ಒಳ್ಳೆಯವರಿಂದ ಕೂಡಿರುವ ನಮ್ಮ ಸಮಾಜ ಅತ್ಯಂತ ಆದರ್ಶ ನಾಗರಿಕ ಸಮಾಜವಾಗಿರಬೇಕಿತ್ತಲ್ಲವೇ ?ಈ ಭ್ರಷ್ಟಾಚಾರ, ಮೋಸ, ವಂಚನೆ, ನಂಬಿಕೆ ದ್ರೋಹ, ಡಾಕ್ಟರ್, ಲಾಯರ್, ಪೋಲೀಸ್, ರಾಜಕಾರಣಿ, ಕಂಟ್ರಾಕ್ಟರ್ ಮುಂತಾದ ಸಮಾಜದ ಎಲ್ಲಾ ಕ್ಷೇತ್ರದ ಜನರ ಮೇಲೆ ಅನುಮಾನ ಏಕೆ. ಇವರೆಲ್ಲರೂ ನಮ್ಮ ತಾಯಿ, ತಂಗಿ, ಅಣ್ಣ, ಅಕ್ಕ, ಅಪ್ಪ, ಅಮ್ಮ, ಮಕ್ಕಳಲ್ಲಿ…
ಮುಂದೆ ಓದಿ..
