ಮೈಸೂರಿನಲ್ಲಿ ರಸ್ತೆ ಅಪಘಾತ: ಸುಳ್ಯದ ಯುವಕ ಮೃತ್ಯು
ಮೈಸೂರಿನಲ್ಲಿ ರಸ್ತೆ ಅಪಘಾತ: ಸುಳ್ಯದ ಯುವಕ ಮೃತ್ಯು ಮೈಸೂರಿನ ಮಳವಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ತಾಲ್ಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಅವರ ಪುತ್ರ ದೀಕ್ಷಿತ್ (25) ಮೃತ ಯುವಕನಾಗಿದ್ದಾರೆ. ದೀಕ್ಷಿತ್ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು, ಬೆಂಗಳೂರಿನಿಂದ ತನ್ನ ಸ್ವಗ್ರಾಮ ಕಂದಡ್ಕದ ಕಲ್ಟಾರಿನ ಮನೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಮೈಸೂರು ಸಮೀಪದ ಮಳವಳ್ಳಿ ಪ್ರದೇಶದಲ್ಲಿ ಅಪರಿಚಿತ ವಾಹನವೊಂದು ದೀಕ್ಷಿತ್ ಅವರ ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ, ಮಾರ್ಗಮಧ್ಯೆ ದೀಕ್ಷಿತ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ದುರ್ಘಟನೆಯಿಂದ ಕುಟುಂಬಸ್ಥರು ಹಾಗೂ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಮೃತ ದೀಕ್ಷಿತ್ ತಂದೆ, ತಾಯಿ ಹಾಗೂ ಅಪಾರ ಬಂಧು…
ಮುಂದೆ ಓದಿ..
