ಅಂತರರಾಷ್ಟ್ರೀಯ ಕಬಡ್ಡಿ ಸಾಧಕರಿಗೆ ವಿಧಾನಸಭೆಯಲ್ಲಿ ಭರ್ಜರಿ ಗೌರವ
ಅಂತರರಾಷ್ಟ್ರೀಯ ಕಬಡ್ಡಿ ಸಾಧಕರಿಗೆ ವಿಧಾನಸಭೆಯಲ್ಲಿ ಭರ್ಜರಿ ಗೌರವ ಬೆಂಗಳೂರು: ಬಾಂಗ್ಲಾದೇಶದ ಢಾಕಾದಲ್ಲಿ ನಡೆದ 2ನೇ ಅಂತರರಾಷ್ಟ್ರೀಯ ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಭಾರತಕ್ಕೆ ಚಾಂಪಿಯನ್ ಹುದ್ದೆ ತಂದ ಕರ್ನಾಟಕದ ಇಬ್ಬರು ಸಾಧಕರಿಗೆ ರಾಜ್ಯ ವಿಧಾನಸಭೆಯಲ್ಲಿ ಗುರುವಾರ ವಿಶಿಷ್ಟ ಸನ್ಮಾನ ನೆರವೇರಿತು. ಭಾರತ ತಂಡದ ಪ್ರಮುಖ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಹಾಗೂ ತಂಡದ ತರಬೇತುದಾರ್ತಿ ತೇಜಸ್ವಿನಿ ಬಾಯಿ ಅವರನ್ನು ಸದನವು ಪಕ್ಷಾತೀತವಾಗಿ ಅಭಿನಂದಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ರಾಜ್ಯ ಸರ್ಕಾರದ ವತಿಯಿಂದ ₹5 ಲಕ್ಷ ಬಹುಮಾನವನ್ನು ಘೋಷಿಸಿದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್ ಅವರು ಕ್ರೀಡಾಪಟುಗಳನ್ನು ಇನ್ನಷ್ಟು ಪ್ರೋತ್ಸಾಹಿಸಲು ಬಹುಮಾನವನ್ನು ₹50 ಲಕ್ಷಕ್ಕೆ ಹೆಚ್ಚಿಸುವಂತೆ ಸರ್ಕಾರವನ್ನು ಮನವಿ ಮಾಡಿದರು. ವಿಪಕ್ಷದ ನಾಯಕ ಆರ್. ಅಶೋಕ್ ಮತ್ತು ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ಸಹ ಸಾಧಕರಿಗೆ ಅಭಿನಂದನೆ ಸಲ್ಲಿಸಿದರು. ಪಕ್ಷಾತೀತವಾಗಿ ವ್ಯಕ್ತವಾದ ಈ…
ಮುಂದೆ ಓದಿ..
