ಹೂವಿನಹಿಪ್ಪರಗಿ : ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಒಂದು ವರ್ಷ – ಡಿ.10ರಂದು ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆ
ಹೂವಿನಹಿಪ್ಪರಗಿ : ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಒಂದು ವರ್ಷ – ಡಿ.10ರಂದು ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆ ಬೆಳಗಾವಿಯ ಸುವರ್ಣಸೌಧದ ಮುಂದೆ ಕಳೆದ ವರ್ಷ ನಡೆದಿದ್ದ 2ಎ ಮೀಸಲಾತಿ ಬೇಡಿಕೆ ಹೋರಾಟದ ವೇಳೆ ಪಂಚಮಸಾಲಿ ಲಿಂಗಾಯತ ಸಮುದಾಯದ ಕಾರ್ಯಕರ್ತರ ಮೇಲೆ ನಡೆದಿದ್ದ ಲಾಠಿಚಾರ್ಜ್ ಘಟನೆಗೆ ಈಗ ಸರಾಗಿ ಒಂದು ವರ್ಷ ಪೂರ್ಣವಾಗಿದೆ. ಈ ಹಿನ್ನೆಲೆಯಲ್ಲಿ, ಡಿಸೆಂಬರ್ 10 ರಂದು ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಪತ್ರಕರ್ತರಿಗೆ ಅವರು ಮಾತನಾಡುವಾಗ, “ಅಂದು ಗಾಂಧಿಭವನದಿಂದ ಸುವರ್ಣಸೌಧದವರೆಗೆ ಮೌನ ರ್ಯಾಲಿ ನಡೆಸುವ ನಿರ್ಧಾರ ಕೈಗೊಂಡಿದ್ದೇವೆ. ಬಸವನ ಬಾಗೇವಾಡಿ ಮತ್ತು ವಿಜಯಪುರ ಪ್ರದೇಶದ ಪಂಚಮಸಾಲಿ ಸಮುದಾಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಬೇಕು”…
ಮುಂದೆ ಓದಿ..
