ಒಂದು ಕಹಿ ನೆನಪು ಮತ್ತು ಎಚ್ಚರಿಕೆ…..
ಜೂನ್ 25 – 1975,ಜೂನ್ 25 – 2025….ಸರಿಯಾಗಿ 50 ವರ್ಷಗಳ ಹಿಂದೆ…..ತುರ್ತು ಪರಿಸ್ಥಿತಿ ( ಎಮರ್ಜೆನ್ಸಿ ) ಜಾರಿಯಾದ ದಿನ…… ಸ್ವತಂತ್ರ ಭಾರತದ, ಸಂಸದೀಯ ಪ್ರಜಾಪ್ರಭುತ್ವದ ಗಣರಾಜ್ಯಗಳ ಒಕ್ಕೂಟ ವ್ಯವಸ್ಥೆಯ ರಾಜಕೀಯ ಇತಿಹಾಸದಲ್ಲಿ ಕೆಲವೇ ಅತ್ಯಂತ ಕಹಿ ಘಟನೆಗಳಲ್ಲಿ ರಾಷ್ಟ್ರಪತಿಗಳು ಸಹಿ ಹಾಕಿದ ಈ ದಿನವೂ ಒಂದು. ಅಂದಿನ ಭಾರತದ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಬಾಹ್ಯ ಮತ್ತು ಆಂತರಿಕ ಭದ್ರತೆಗೆ ಅಪಾಯವಿದೆ ಎಂಬ ನೆಪದಿಂದ, ತಮ್ಮ ಅಧಿಕಾರ ಉಳಿಸಿಕೊಳ್ಳಲು ಈ ದೇಶದ ಮೇಲೆ ತುರ್ತುಪರಿಸ್ಥಿತಿಯನ್ನು ಹೇರಿದರು….. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಸದಸ್ಯರುಗಳು ಅತ್ಯಂತ ಗಂಭೀರವಾಗಿ ಒಂದು ವಿಷಯವನ್ನು ಸಂವಿಧಾನದಲ್ಲಿ ಸೇರಿಸಿರುತ್ತಾರೆ. ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆಗೆ ನಿಜವಾಗಲೂ ದುಷ್ಟ ಶಕ್ತಿಗಳಿಂದ ಅತ್ಯಂತ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾದಾಗ ದೇಶವನ್ನು ರಕ್ಷಿಸಲು ಈ ಒಂದು ಸ್ವಯಂ ವಿವೇಚನೆಯ…
ಮುಂದೆ ಓದಿ..
